HIGH COURT: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜ್ಜು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

More News

You cannot copy content of this page