ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಇನ್ಸ್ ಪೆಕ್ಟರ್ ನಂದೀಶ್ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಸರಕಾರವನ್ನು ಒತ್ತಾಯ ಮಾಡಿದರು.
ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ @BSBommai ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ.1/7#CashForPosting pic.twitter.com/mXqghB6cHz