ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಹಾಕುವ ಹುನ್ನಾರವೇ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾದ್ಯಮ ಕಚೇರಿಗಳಿಗೆ ಸ್ವೀಟ್ ಬಾಕ್ಸ್ ಜತೆಯಲ್ಲಿ ಹಣ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ.

ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಡುವ ಹುನ್ನಾರವೇ ಎಂದು ಕಾಂಗ್ರೆಸ್ ಬಿಜೆಪಿ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಕಾಂಗ್ರೆಸ್ ಟ್ವೀಟ್ ಮಾಡಿರುವ ಸಂಪೂರ್ಣ ವಿವರ ಈ ರೀತಿಯಿದೆ.
ನಾವು ಸುಮ್ಮನೇ @BSBOMMAI ಅವರನ್ನು ಪೇ ಸಿಎಂ ಎಂದಿಲ್ಲ ! ಈ ಸರ್ಕಾರ ಲಂಚವನ್ನು ಪಡೆಯುತ್ತಿದೆ, ಲಂಚವನ್ನು ನೀಡುತ್ತದೆ ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ!? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ ? #SayCM

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ ? ಆ ಹಣದ ಮೂಲ ಯಾವುದು ? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು. #SayCM ಎಂದು ಟ್ವೀಟ್ ಮಾಡಲಾಗಿದೆ.

#congress tweet #cmbasavaraj bommai #source of money #saycm #commission money #sweet box #media people

More News

You cannot copy content of this page