ಅಡಿಲೇಡ್ : ಟಿ20 ವಿಶ್ವಕಪ್ ಟೂರ್ನಿಯ ಮಹತ್ವದ ಸೂಪರ್-12 ಪಂದ್ಯದಲ್ಲಿ ಇಂದು ಭಾರತ-ಬಾಂಗ್ಲಾದೇಶ ಮುಖಾಮುಖಿ ಆಗಲಿವೆ. ಸೆಮಿಫೈನಲ್ಸ್ ರೇಸ್‌ನಲ್ಲಿರುವ ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು, ಇದಕ್ಕಾಗಿ ಎರಡು ತಂಡಗಳು ಗೆಲ್ಲಲ್ಲೆಬೇಕಾದ ಒತ್ತಡಕ್ಕೆ ಸಿಲುಕಿವೆ.
ಅಡಿಲೇಡ್ ಓವಲ್ ಮೈದಾನ ಉಭಯ ತಂಡಗಳ ಜಿದ್ದಾಜಿದ್ದಿನ ಹಣಾಹಣಿಗೆ ವೇದಿಕೆಯಾಗಿದೆ. ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಟಿ20 ಕ್ರಿಕೆಟ್‌ನಲ್ಲಿ ಈವರೆಗೂ 11 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಟೀಂ ಇಂಡಿಯಾ 10 ಬಾರಿ ಗೆದ್ದು ಪ್ರಾಬಲ್ಯ ಮೆರೆದಿದೆ. 2019ರಲ್ಲಿ ಬಾಂಗ್ಲಾ ಹುಲಿಗಳು ಭಾರತದ ವಿರುದ್ಧ ಏಕೈಕ ಗೆಲುವು ಸಾಧಿಸಿದೆ. ಹೀಗಾಗಿ ಎರಡು ತಂಡಗಳ ನಡುವಿನ ಇಂದಿನ ಪಂದ್ಯದಲ್ಲಿ ಭಾರತ ಗೆಲುವಿನ ಫೇವರೇಟ್ ಎನಿಸಿದೆ.
ಹಾಗೆಂದ ಮಾತ್ರಕ್ಕೆ ಬಾಂಗ್ಲಾದೇಶ ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಟೀಂ ಇಂಡಿಯಾ ಆಟಗಾರರು ಸ್ವಲ್ಪಮಟ್ಟಿಗೆ ಮೈಮರೆತು ಆಡಿದ್ದೇ ಆದಲ್ಲಿ ಭಾರತವನ್ನು ಸೋಲಿಸುವ ಎಲ್ಲಾ ಸಾಮರ್ಥ್ಯ ಬಾಂಗ್ಲಾದೇಶಕ್ಕಿದೆ. ಹೀಗಾಗಿ ಭಾರತೀಯ ಆಟಗಾರರು ಎಲ್ಲಾ ವಿಭಾಗದಲ್ಲೂ ಸಹ ಅತ್ಯಂತ ಎಚ್ಚರಿಕೆಯ ಆಟವಾಡಬೇಕಾದ ಅಗತ್ಯವಿದೆ. ಟೂರ್ನಿಯಲ್ಲಿ ಎರಡು ತಂಡಗಳು ತಲಾ ಮೂರು ಪಂದ್ಯಗಳನ್ನು ಆಡಿದ್ದು, ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳನ್ನು ಪಡೆದಿವೆ. ಇಂದಿನ ಪಂದ್ಯದಲ್ಲಿ ಯಾರೇ ಗೆದ್ದರು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುತ್ತಾರೆ.
ಆದರೆ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಇಂದಿನ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿದೆ. ಅಡಿಲೇಡ್ನಲ್ಲಿ ಮಂಗಳವಾರ ಇಡೀ ದಿನ ಮಳೆ ಸುರಿದಿದ್ದು, ಇಂದು ಕೂಡ ಶೇ.60-70ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಮಹತ್ವದ ಪಂದ್ಯಕ್ಕೆ ವರುಣನ ಕಾರ್ಮೋಡ ಕವಿದಿದೆ. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಎರಡು ತಂಡಗಳಿಗೆ ತಲಾ ಒಂದು ಅಂಕ ಸಿಗಲಿದ್ದು, ಎರಡು ತಂಡಗಳು ತಮ್ಮ ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿವೆ.
ಸಂಭಾವ್ಯ ತಂಡಗಳು:
ಭಾರತ: ರೋಹಿತ್ ಶರ್ಮ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶದೀಪ್ ಸಿಂಗ್.
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್, ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್.
#bangladesh #team India #t20 cricket world cup #today match #India is chances to win