ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಆಟಗಾರರು ನ್ಯೂಜಿ಼ಲೆಂಡ್ ಹಾಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಉಭಯ ತಂಡಗಳ ವಿರುದ್ಧದ ಪ್ರವಾಸಕ್ಕಾಗಿ 16 ಮಂದಿ ಆಟಗಾರರ ತಂಡವನ್ನ ಪ್ರಕಟಿಸಲಾಗಿದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳು ನಡೆಯಲಿದೆ. ಭಾರತ ಹಾಗೂ ಕಿವೀಸ್ ನಡುವಿನ ಟಿ20 ಪಂದ್ಯಾವಳಿ ನ.18ರಿಂದ 22ರವರೆಗೆ ನಡೆಯಲಿದೆ. ಇದಾದ ಬಳಿಕ ನ.25ರಿಂದ 30ರವರೆಗೆ ಎರಡು ತಂಡಗಳ ನಡುವೆ ಏಕದಿನ ಪಂದ್ಯಗಳು ನಡೆಯಲಿದೆ. ಆದರೆ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಿವೀಸ್ ವಿರುದ್ಧದ ಸರಣಿ ನಡೆಯುವ ಹಿನ್ನೆಲೆಯಲ್ಲಿ ಎರಡು ಸರಣಿಗಳಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಪ್ರಮುಖ ಆಟಗಾರರ ವಿಶ್ರಾಂತಿ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯಗೆ ಟಿ20 ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದ್ದರೆ. ಶಿಖರ್ ಧವನ್ ಏಕದಿನ ತಂಡವನ್ನ ಮುನ್ನಡೆಸಲಿದ್ದಾರೆ.

ಭಾರತ T20 ತಂಡ
ಹಾರ್ದಿಕ್ ಪಾಂಡ್ಯ(ನಾಯಕ), ಶುಭ್ಮನ್ ಗಿಲ್, ಇಶಾಕ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಸಂಜೂ ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲ್ಲಿಕ್.
ಭಾರತ ODI ತಂಡ
ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಸಂಜೂ ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಶಹಬಾಜ್ ಅಹ್ಮೆದ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ದೀಪಕ್ ಚಹರ್, ಕುಲ್ದೀಪ್ ಸೆನ್, ಉಮ್ರಾನ್ ಮಲ್ಲಿಕ್.
ನ್ಯೂಜಿಲೆಂಡ್ ಪ್ರವಾಸದ ಬಳಿಕ ಭಾರತ ತಂಡ ಡಿಸೆಂಬರ್ ಮೊದಲ ವಾರದಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಮೂರು ಪಂದ್ಯಗಳ ODI ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನ ಪ್ರಕಟಿಸಲಾಗಿದೆ. ನ್ಯೂಜಿ಼ಲೆಂಡ್ ಪ್ರವಾಸದಿಂದ ವಿಶ್ರಾಂತಿ ಪಡೆದಿದ್ದ ಪ್ರಮುಖ ಆಟಗಾರರು ಬಾಂಗ್ಲಾದೇಶ ಪ್ರವಾಸಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಉಭಯ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಡಿಸೆಂಬರ್ 4ರಿಂದ 10ರವರೆಗೆ ನಡೆಯಲಿದೆ. ODI ಸರಣಿ ನಂತರ ಬಾಂಗ್ಲಾ ಹಾಗೂ ಭಾರತದ ನಡುವೆ ಡಿಸೆಂಬರ್ 14 ಮತ್ತು 22ರಿಂದ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದೆ.
ಬಾಂಗ್ಲಾ ಪ್ರವಾಸಕ್ಕೆ ಭಾರತ ODI ತಂಡ
ರೋಹಿತ್ ಶರ್ಮ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಶಿಖರ್ ಧವನ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಯಶ್ ದ್ಯಾಲ್.
ಬಾಂಗ್ಲಾ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮ(ನಾಯಕ), ಕೆಎಲ್ ರಾಹುಲ್, ಶುಭ್ಮನ್ ಗಿಲ್, ಚೇತೇತ್ವರ್ ಪುಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್‌ದೀಪ್ ಯಾದವ್, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.