Bharat Jodo: ಭಾರತ್ ಜೋಡೋದ ಅಧಿಕೃತ ಟ್ವಿಟರ್ ಖಾತೆ ಅಮಾನತು ಆದೇಶ ರದ್ದು

ಬೆಂಗಳೂರು : ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯಲ್ಲಿ ಹಕ್ಕುಸ್ವಾಮ್ಯ ಪಡೆಯದೇ ಕೆಜಿಎಫ್ 2 ಚಿತ್ರದ ಹಾಡು ಬಳಕೆ ಪ್ರಕರಣ ಸಂಬಂಧ ಕಾಂಗ್ರೆಸ್(ಐಎನ್​ಸಿ​) ಮತ್ತು ಭಾರತ್ ಜೋಡೋದ ಅಧಿಕೃತ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟರ್​ ಸಂಸ್ಥೆಗೆ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್​ ರದ್ದು ಮಾಡಿದೆ.

ಅಲ್ಲದೇ, ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್​ಸಿ​) ಮತ್ತು ಭಾರತ್ ಜೋಡೋದ ಅಧಿಕೃತ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ವಾಣಿಜ್ಯ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಈ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಿ.ನರೇಂದರ್​ ಅವರಿದ್ದ ವಿಭಾಗೀಯ ಪೀಠ, ವಾಣಿಜ್ಯ ನ್ಯಾಯಾಲಯ ನೀಡಿದ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರರು, ಆಕ್ಷೇಪಾರ್ಹವಾದ ಅಂಶಗಳನ್ನು ತೆಗೆದು ಹಾಕುವುದಕ್ಕೆ ಒಪ್ಪಿರುವುದರಿಂದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡುತ್ತಿರುವುದಾಗಿ ಹೈಕೋರ್ಟ್​ ಅಭಿಪ್ರಾಯ ಪಟ್ಟಿದೆ. ಎಂಆರ್‌ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಚಿತ್ರಗೀತೆಗಳ ಹಕ್ಕುಸ್ವಾಮ್ಯ ಹೊಂದಿದೆ. ಆದರೆ, ಎಂಆರ್‌ಟಿ ಮ್ಯೂಸಿಕ್‌ನಿಂದ ಹಕ್ಕುಸ್ವಾಮ್ಯ ಪಡೆಯದೇ ಭಾರತ್​ ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರದ ಹಿಂದಿ ಗೀತೆ ಬಳಕೆ ಸಂಬಂಧ ಎಂಆರ್‌ಟಿ ಮ್ಯೂಸಿಕ್ ಕಂಪನಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿತ್ತು.

More News

You cannot copy content of this page