ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 11ರಂದು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರಅವರು ವಿಮಾನ ನಿಲ್ದಾಣಕ್ಕೆ ಪೊಲೀಸರ ಜೊತೆ ತೆರಳಿ ಸ್ಥಳ ಪರೀಶಿಲನೆ ನಡೆಸಿದರು. ಜೊತೆಗೆ ಭದ್ರತೆ ಬಗ್ಗೆಯೂ ನಗರ ಪೊಲೀಸ್ ಆಯುಕ್ತ ಶ್ರೀ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

