HD Kumaraswamy Tweet: ಹಿರಿಯ ನಟ ಲೋಹಿತಾಶ್ವ ನಿಧನ: ಗಣ್ಯರಿಂದ ಸಂತಾಪ

ಹಿರಿಯ ನಟ ಲೋಹಿತಾಶ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕನ್ನಡದ ಅತ್ಯುತ್ತಮ ನಟರಲ್ಲಿ ಒಬ್ಬರಾದ ಶ್ರೀ ಲೋಹಿತಾಶ್ವ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಪ್ರತಿಭೆಯಿಂದಲೇ ಪಾತ್ರಗಳಿಗೆ ಹೊಳಪು ತುಂಬುತ್ತಿದ್ದ ಅವರು ನಾಟಕಕಾರರೂ ಹೌದು. ಪ್ರಾಧ್ಯಾಪಕರಾಗಿ ಅನೇಕರಿಗೆ ಅಕ್ಷರ ಬೆಳಕು ನೀಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನುಭಗವಂತ ಕರುಣಿಸಲಿ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಇನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ನಿಧನದ ಸುದ್ದಿ ತಿಳಿದು ಮನಸಿಗೆ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕನ್ನಡ ಚಿತ್ರರಂಗದಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಇರುತ್ತದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

More News

You cannot copy content of this page