ಬೆಂಗಳೂರು ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದರು.
ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು. ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತರರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ ಮೆಂಟ್ ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಅವರ ಮಾಡಿರುವ ಕೆಲಸ ಅದ್ಭುತವಾಗಿದೆ. ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ.