Search

VINAY AS A GANGLEADER IN ‘PEPE’: ‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್: ಗ್ಯಾಂಗ್ ಲೀಡರ್ ಲುಕ್ ನಲ್ಲಿ ಗ್ರ್ಯಾಂಡ್ ಎಂಟ್ರಿ ಗೆ ವಿನಯ್ ಸಜ್ಜು..

‘ಪೆಪೆ’… ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿದ್ದ ಚಿತ್ರ.. ನಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ, ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ಪೆಪೆ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ.

ಇನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರ್ತಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಆರಂಭದಿಂದ ಒಂದೇ ರೀತಿ ಸಿನಿಮಾಗಳಿಗೆ ಮೊರೆ ಹೋಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರ್ತಿರುವ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಟೀಸರ್, ಪೋಸ್ಟರ್ ಝಲಕ್ ನಲ್ಲಿ ವಿನಯ್ ಕಂಡು ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದಾರೆ.

ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ, ಮಯೂರ್ ಪಟೇಲ್ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
2018ರಲ್ಲಿ ತೆರೆಕಂಡ ಅನಂತು v/s ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ಪೆಪೆ ಜೊತೆಗೆ ಗ್ರಾಮಾಯಣ, ಅದೊಂದಿತ್ತು ಕಾಲ ಸಿನಿಮಾಗಳಲ್ಲೂ ವಿನಯ್ ಎಂಗೇಜ್ ಆಗಿದ್ದಾರೆ.

#VINAY RAJKUMAR #PEPE #RAGHAVENDRA RAJKUMAR #PEPE FILM #SHOOTING COMPLITED #DODDAMANE #FANS

More News

You cannot copy content of this page