Search

Border Dispute : ಸುಪ್ರೀಂಕೋರ್ಟ್ ತೀರ್ಪು ನೀಡುವ ಮೊದಲೆ ಸೋಲು ಒಪ್ಪಿಕೊಂಡ ಮಹಾರಾಷ್ಟ್ರ..?

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಖ್ಯಾತೆ ಮುಂದುವರೆಸಿದೆ. ಬೇಡ ಬೇಡ ಇಂಗು ತಿಂದ ಮಂಗನಂತೆ ಸುಪ್ರೀಂಕೋರ್ಟ್ ನಲ್ಲಿ ಧಾವೆ ಹೂಡಿದ್ದ ಮಹಾರಾಷ್ಟ್ರ ಸರ್ಕಾರ ಈಗ ಉಲ್ಟಾ ಹೊಡೆದಿದೆ.

ಗಡಿವಿದಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೊಸ ವರಸೆ ಶುರುಮಾಡಿಕೊಂಡಿದ್ದಾರೆ. ಗಡಿವಿವಾದ ಕುರಿತಂತೆ ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಆದ್ರೆ ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಎರಡು ರಾಜ್ಯಗಳು ಬಗೆಹರಿಸಿಕೊಳ್ಳಬೇಕು ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ ಎಂದು ಶಿಂಧೆ ಹೇಳಿದ್ದಾರೆ.

ಗಡಿವಿವಾದದ ಸಂಬಂಧ ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ಈ ವಿವಾದ ಸರ್ವ ಸಮ್ಮತಿ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು. ಈ ನಿಟ್ಟಿನಲ್ಲಿ ನಾವು ಸರ್ವ ಪಕ್ಷಗಳ ಸಭೆಯನ್ನು ಸಹ ಮಾಡಿದ್ದೇವೆ. ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಸಿಗುತ್ತಿತ್ತು ಅದನ್ನ ಹೆಚ್ಚಿಸಿದ್ದೇವೆ.

ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಹತ್ತು ಸಾವಿರದಿಂದ 20 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿದ್ದೇವೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು ಅದನ್ನ ಶುರು ಮಾಡಿದ್ದೇವೆ. ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾಪುಲೆ ಯೋಜನೆ ನೀಡಲು ನಿರ್ಣಯ ಮಾಡಲಾಗಿದೆ. ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಲಾಗಿದೆ. ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು, ಮತ್ಯಾರು ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆ ಬಂದಿವೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ಉಳಿದ ವಿಷಯ ಏನಿದೆ ಅದು ನ್ಯಾಯಾಲಯದಲ್ಲಿದೆ ಎಂದ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

More News

You cannot copy content of this page