CONDOMS, CIGARETTES FOUND IN SCHOOL BAG: ವಿದ್ಯಾರ್ಥಿಗಳ ಬ್ಯಾಗ್ ಚೆಕ್ ಮಾಡಿದ ಶಾಲಾ ಶಿಕ್ಷಕರಿಗೆ ಶಾಕ್ : ಕಾಂಡೋಮ್ -ಸಿಗರೇಟ್ ಪತ್ತೆ

ಬೆಂಗಳೂರು : ಶಾಲೆಗಳಲ್ಲಿ ಮೋಬೈಲ್ ಫೋನ್ ಬಳಕೆ ನಿಷೇಧವಿದ್ದರೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಾಲೆಗಳಿಗೆ ತರುತ್ತಿರುವುದರ ಬಗ್ಗೆ ಹಠಾತ್ ಆಗಿ ಶಿಕ್ಷಕರು ಪ್ರತಿಯೊಬ್ಬರ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಬೆಂಗಳೂರು ನಗರದ ಹಲವು ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು, ಸಿಗರೇಟ್, ಲೈಟರ್, ಫೆವಿಕಾಲ್ ಮುಂತಾದ ವಸ್ತುಗಳು ಪತ್ತೆಯಾಗಿವೆ.
9 ಮತ್ತು 10ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬ್ಯಾಗ್ ಗಳಲ್ಲಿ ಕಾಂಡಮ್, ಗರ್ಭ ನಿರೋಧಕ‌ ಮಾತ್ರೆ ಪತ್ತೆಯಾಗಿರುವುದನ್ನು ಕಂಡ ಶಿಕ್ಷಕರು ಗಾಬರಿಯಾಗಿದ್ದು, ಈ ಬಗ್ಗೆ ಎಚ್ಚರವಹಿಸುವಂತೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಸೂಚನೆ ನೀಡಿದೆ.
ನಗರದ ಕೆಲವು ಶಾಲೆಗಳಲ್ಲಿ 10 ದಿನಗಳ ಕಾಲ ರಜೆ ಘೋಷಿಸಿ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ನೀಡುವಂತೆ ಸಲಹೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಬಿಹೇವಿಯರ್ ನಲ್ಲಿ ಬದಲಾವಣೆ ಕಂಡು ಬಂದ ಹಿನ್ನೆಲೆ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಲಾಯಿತು.
ಶಾಲೆಯಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ ಶಾಲೆಗೆ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಮೊಬೈಲ್ ಫೋನ್ ತರುತ್ತಿದ್ದಾರೆ. ಈ ಬಗ್ಗೆ ತಪಾಸಣೆಗೆ ಇಳಿದ ವೇಳೆ ಶಿಕ್ಷಕರಿಗೆ ಕಾಂಡಮ್, ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಳ್ಳುವಂತೆ ಖಾಸಗಿ ಶಾಲಾ ಶಿಕ್ಷಣ ಒಕ್ಕೂಟ ಆಗ್ರಹಿಸಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆ ತಪ್ಪು ದಾರಿಗೆ ಹೋಗುವ ಸಾಧ್ಯತೆಗಳಿವೆ ಎಂದು ಮಂಡಳಿ ಆತಂಕ ವ್ಯಕ್ತ ಪಡಿಸಿದೆ.

#SCHOOL BAG #CONDOMS #CIGARATTES #BANGALURU SCHOOL #9TH AND 10TH STANDARD #FEVICOL #LIGHTER #FOUND #TEACHERS #STUDENTS #PARENTS

More News

You cannot copy content of this page