ದುಬೈ: ಅರೆ ಬರೆ ಬಟ್ಟೆ ಹಾಕಿಕೊಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ಮಾಡೆಲ್ ಉರ್ಫಿ ಜಾವೇದ್ ರನ್ನ ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಭಿನ್ನ ಉಡುಪಿನ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುವ ನಟಿ ವಿರುದ್ಧ ಸಾಕಷ್ಟು ಟೀಕೆ ಕೇಳಿ ಬಂದಿತ್ತು. ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ, ಅಶ್ಲೀಲವಾಗಿ ಉರ್ಫಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ವಕೀಲರೊಬ್ಬರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.

ಇದೀಗ ಸಾರ್ವಜನಿಕವಾಗಿ ಅಶ್ಲೀಲ ಉಡುಪಿನಲ್ಲಿ ದುಬೈನಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ದುಬೈನಲ್ಲಿ ತುಂಡು ಉಡುಗೆ ಹಾಕಿ ಸಾರ್ವಜನಿಕವಾಗಿ ಚಿತ್ರೀಕರಣ ಮಾಡಲು ಅವಕಾಶವಿಲ್ಲ. ಹೀಗಾಗಿ ಅವರು ಸಂಕಷ್ಟ ಎದುರಿಸಬೇಕಾಗಿದೆ. ಸದ್ಯ ಉರ್ಫಿ ಪೊಲೀಸರ ವಶದಲ್ಲಿ ಇದ್ದಾರೆ ಎನ್ನಲಾಗಿದೆ.

ನಿನ್ನೆಯಷ್ಟೇ ಧ್ವನಿ ಪೆಟ್ಟಿಗೆಗೆ ತಗಲುವ ಸೋಂಕು ಲಾರಿಂಜೈಟಿಸ್ ನಿಂದ ಬಳಲುತ್ತಿರುವುದಾಗಿ ನಟಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಬಿಡುಗಡೆ ಮಾಡುವ ಮೂಲಕ ತಿಳಿಸಿದ್ದರು. ಆದರೆ ತಮ್ಮ ವಿರುದ್ಧ ಇರುವ ಕೇಸ್ ಗಳಿಂದ ತಪ್ಪಿಸಿಕೊಳ್ಳಲು ಹೀಗೆ ಆಸ್ಪತ್ರೆಗೆ ದಾಖಲಾಗಿದ್ದರು ಎಂಬ ಚರ್ಚೆಯೂ ಸಹ ಕೇಳಿ ಬರ್ತಿದ್ದು, ಸಧ್ಯ ಹಾಟ್ ಬೆಡಗಿಗೆ ಪೊಲೀಸ್ ಸಂಕಷ್ಟ ಎದುರಾಗಿದೆ.
#DUBAI POLICE #URFI JAVED #SHOOTING #HOT STAR #HOSPITALIZED #LOCKUP