ಬೆಳಗಾವಿ ; ಡಿ.28 ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 10.15 ಗಂಟೆಗೆ ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ಮಹಾತ್ಮಾ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟದ ಸದಸ್ಯರು ಹಾಗೂ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.




