Guinness World Record: ಗಿನ್ನಿಸ್ ದಾಖಲೆ ಸೇರಿದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ

ಹುಬ್ಬಳ್ಳಿ: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಈಗ ಮತ್ತೊಂದು ಗೌರವದ ಗರಿಯನ್ನು ಮುಡಿಗೇರಿಸಿಕೊಂಡಿದೆ. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿರುವ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್‌ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

ಹೌದು, ವಿಶ್ವದಲ್ಲಿಯೇ ಅತಿ ಉದ್ದನೆಯ ರೈಲ್ವೆ ಫ್ಲಾಟ್‌ಫಾರ್ಮ್ ಇದಾಗಿದೆ. ಹುಬ್ಬಳ್ಳಿಯ ಎಸ್ಎಸ್ಎಸ್ ರೈಲು ನಿಲ್ದಾಣದಲ್ಲಿರುವ ಪ್ಲಾಟ್ ಫಾರ್ಮ್ ವಿಶ್ವದಲ್ಲಿಯೇ ಅತಿ ಉದ್ದನೆಯದ್ದು, ಎಂಬುದನ್ನು ಗಿನ್ನಿಸ್ ರೆಕಾರ್ಡ್ಸ್‌ನಲ್ಲಿ ಗುರುತಿಸಿದೆ.

ಮಾರ್ಚ್ 12ರಂದು ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಪ್ಲಾಟ್‌ಫಾರ್ಮ್‌ನಲ್ಲಿ ಇಲೆಕ್ಟಿಕ್ ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ ದಾದರ ಎಕ್ಸ್‌ಪ್ರೆಸ್ ಮತ್ತು ಬೆಳಗಾವಿ- ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದರು. ಆ ಮೂಲಕ ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಲೋಕಾರ್ಪಣೆಗೊಳಿಸಿದ್ದರು.

More News

You cannot copy content of this page