BJP Star Campaigners List: ಬಿಜೆಪಿ ೪೦ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ: ನಟ ಸುದೀಪ್ ಹೆಸರಿಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷ ೪೦ ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯ ಚುನಾವಣೆ ಪ್ರಚಾರದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಫಾಲ್ಗೊಳ್ಳುತ್ತಿರುವುದು ವಿಶೇಷ. 
ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಿಡುಗಡೆಗೊಳಿಸಿದರು.

ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸೂಕ್ ಮಾಂಡವೀಯ, ಯೋಗಿ ಆದಿತ್ಯನಾಥ್ ಸೇರಿದಂತೆ ಕೇಂದ್ರದ ಹಲವು ನಾಯಕರು ಭಾಗಿಯಾಗಲಿದ್ದಾರೆ.

ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಕೆಲ ಹಾಲಿ ಸಚಿವರು ಹಾಗು ನಟರಾದ ಜಗೇಶ್, ಶೃತಿ, ತಾರಾ ಅನುರಾಧ ಪಟ್ಟಿಯಲ್ಲಿ ಸೇರಿದ್ದಾರೆ.

ವಿಪರ್ಯಾಸವೆಂದರೆ, ಸ್ಟಾರ್ ಕ್ಯಾಂಪೇನರ್ ಎಂದು ಕರೆತಂದ ನಟ ಸುದೀಪ್ ಹೆಸರು ಪಟ್ಟಿಯಲ್ಲಿ ಇಲ್ಲ.
ಒಟ್ಟಿನಲ್ಲಿ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಯಸಿರುವ ಬಿಜೆಪಿ ಪಕ್ಷ, ಕೇಂದ್ರದ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಯಶಸ್ಸು ಪಡೆದಂತೆ ಕರ್ನಾಟಕದಲ್ಲಿ ಇದು ಎಷ್ಟರಮಟ್ಟಿಗೆ ಫಲಪ್ರದವಾಗುತ್ತದೆ ಎಂಬುದನ್ನ ಕಾದು ನೋಡಬೇಕಿದೆ.

More News