ಉಸಿರಾಟದ ಸಮಸ್ಯೆ ಮತ್ತು ಅಧಿಕ ರಕ್ತದ ಒತ್ತಡದಿಂದ 71 ವರ್ಷ ವಯಸ್ಸಿನ ಬಹುಭಾಷಾ ನಟ ಶರತ್ ಬಾಬು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಮೊದಲೇ ವಯೋ ಸಹಜ ಆರೋಗ್ಯ ಸಮಸ್ಯೆ ಯಿಂದ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೊಮ್ಮೆ ಆರೋಗ್ಯ ದಲ್ಲಿ ಹೆಚ್ಚು ಏರುಪೇರಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶರತ್ ಅವರನ್ನು ಕುಟುಂಬಸ್ಥರು ಹೈದರಾಬಾದ್ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾರಂಭದಲ್ಲಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಯ್ತು. ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ನಾರ್ಮಲ್ ವಾರ್ಡ್ ಗೆ ಶಿಪ್ಟ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವೈದ್ಯರು,
ಶರತ್ ಬಾಬು ಅವರ ಆರೋಗ್ಯ ಸ್ಥಿರವಾಗಿದೆ. ಯಾರು ಆತಂಕಪಡುವ ಆಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ ಕರೆತಂದ ವೇಳೆ ಶರತ್ ಬಾಬು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದರು. ಹಾಗಾಗಿ ಐಸಿಯುನಲ್ಲಿ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಈಗ ಚೇತರಿಸಿಕೊಂಡಿದ್ದು ನಾರ್ಮಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದರು.