Zameer Ahmed Khan Oath: ಇಂಗ್ಲೀಷ್ ನಲ್ಲಿ ಜಮೀರ್ ಅಹಮದ್ ಖಾನ್ ಪ್ರಮಾಣವಚನ: ಕನ್ನಡಪರ ಹೋರಟಗಾರರಿಂದ ತೀವ್ರ ಆಕ್ಷೇಪ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಇಂದು ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಚಿವರಾಗಿ ಜಮೀರ್ ಅಹಮದ್ ಖಾನ್ ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
ಜಮೀರ್ ಅಹಮದ್ ಖಾನ್ ಅವರ ನಡೆಯನ್ನು ಖಂಡಿಸಿರುವ ಕನ್ನಡ ರಕ್ಷಣಾ ವೇದಿಕೆ

ಯ ರಾಜ್ಯ ಘಟಕದ ಅಧ್ಯಕ್ಷ ಟಿ ಎ ನಾರಾಯಣಗೌಡ, ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಿ ಜಡ್ ಜಮೀರ್ ಅಹಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು, ಎಲ್ಲಾ ಸಚಿವರೂ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ಜಮೀರ್ ಅವರು ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

https://twitter.com/nanuramu/status/1659852592942563328?s=20

More News

You cannot copy content of this page