ಬೆಂಗಳೂರು : ನಟ, ರಾಜಕಾರಣಿ ಅಂಬರೀಷ್ ಹಾಗೂ ನಟಿ, ಸಂಸದೆ ಸುಮಲತಾ ಅಂಬರೀಷ್ ಅವರ ಪುತ್ರ ನಟ ಅಭಿಷೇಕ್ ಅಂಬರೀಶ್ ಅವರು ಪ್ರೀತಿಸಿದ ಹುಡುಗಿ ಅವಿವಾ ಬಿದ್ದಪ್ಪ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಭಿಷೇಕ್ ಹಾಗೂ ಅವಿವಾ ಕಲ್ಯಾಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್ ಪಾಲ್ಗೊಂಡು ಶುಭ ಹಾರೈಸಿದರು.

ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರ ಸಮ್ಮುಖದಲ್ಲಿ ಇವರಿಬ್ಬರು ಸಪ್ತಪದಿ ತುಳಿದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖಾಮುಖಿಯಾದರು.




#ABHISHEKAMBARISH #AMBARISH #SUMALATHAAMBARISH #AVIVABIDDAPPA #SIDDARAMAIAH #ZAMEERAHAMEDKHAN #BASAVARAJBOMMAI #CORMERCM #CHIEFMINISTER