ಭಾರತದ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದ ಮೊದಲ ದಿನದಾಟದಲ್ಲಿ ಅಮೋಘ ಶತಕ ಬಾರಿಸಿರುವ ಆಸ್ಟ್ರೇಲಿಯಾ ತಂಡದ ಟ್ರಾವಿಸ್ ಹೆಡ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಲಂಡನ್‌ನ ಓವಲ್ ಮೈದಾನದಲ್ಲಿ ಬುಧವಾರ ಆರಂಭವಾದ ಪಂದ್ಯದ ಮೊದಲ ದಿನದಾಟದಲ್ಲಿ ಆಸೀಸ್ ಬ್ಯಾಟಿಂಗ್ ಪ್ರಾಬಲ್ಯ ಮೆರೆಯಿತು. ಪ್ರಮುಖವಾಗಿ ಮೊದಲ ದಿನದಂತ್ಯಕ್ಕೆ ವೈಯಕ್ತಿಕ 146* ರನ್‌ಗಳಿಸಿರುವ ಟ್ರಾವಿಸ್ ಹೆಡ್ ಐತಿಹಾಸಿಕ ಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೇ ಆಸೀಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ (95) ಜೊತೆಗೂಡಿ 4ನೇ ವಿಕೆಟ್‌ಗೆ ಅಜೇಯ 251 ರನ್‌ಗಳಿಸಿ ಗಮನ ಸೆಳೆದಿದ್ದಾರೆ.

ಆಸೀಸ್ ತಂಡದ ಮೊದಲ ಇನ್ನಿಂಗ್ಸ್‌ನ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಹೆಡ್, ಇನ್ನಿಂಗ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಹಂತ ಹಂತವಾಗಿ ರನ್‌ಗಳಿಸಿದ ಹೆಡ್, ಆ ಮೂಲಕ ಟೀಂ ಇಂಡಿಯಾ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದರು. ಕೇವಲ 106 ಬಾಲ್ ಗಳಿಗೆ ಶತಕ ಬಾರಿಸಿ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ದಿನದ ಗೌರವ ತಂದುಕೊಟ್ಟರು.
ಭರ್ಜರಿ ಫಾರ್ಮ್ ನೊಂದಿಗೆ ಟೀಂ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ಟ್ರಾವಿಸ್ ಹೆಡ್, ಆಕರ್ಷಕ ಶತಕ ಬಾರಿಸುವ ಮೂಲಕ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡದ ಡೆವೋನ್ ಕಾನ್ವೆ ಬಾರಿಸಿದ್ದ 54 ರನ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದ ಗರಿಷ್ಠ ಸ್ಕೋರ್ ಆಗಿತ್ತು.
#AUSTRELIA #INDIA #TEAMINDIA #WTC #WORLDTESTCRICKET #FINALMATCH #ENGLAND #TRAVISHEAD #CENTURY #ONEHUNDRED