Search

MADHU BANGARAPPA: ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶವನ್ನು ತೆಗೆದುಹಾಕಲು ಕ್ರಮ : ಮಧುಬಂಗಾರಪ್ಪ

ಬೆಂಗಳೂರು : ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲಾ ಪ್ರದರ್ಶನಕ್ಕೆ‌ ಅನುಮತಿ ನೀಡಿರುವುದಕ್ಕೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ದೈವದ ಕೋಲಾ ಪ್ರದರ್ಶನದ ವಸ್ತು ಅಲ್ಲ, ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ, ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ, ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಸ್ಪಷ್ಟಪಡಿಸಿದರು.
ಹೀಗಾಗಿ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಸುನೀಲ್ ಕುಮಾರ್ ಒತ್ತಾಯಿಸಿದರು. ಇದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸದನದಲ್ಲಿ ಭರವಸೆ ನೀಡಿದರು.

More News

You cannot copy content of this page