Search

Action To Prevent Students From Suffering: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ : ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಇಂದು ಜಿಲ್ಲೆಯ ಸಾಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗಿದೆ. ಪೂರಕ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ ಎಂದರು.

ಶಿಕ್ಷಕರ ಸಮಾಲೋಚನೆ (ಕೌನ್ಸಲಿಂಗ್) ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಲಾಗಿದ್ದು, ಒಂದರಿಂದ ಎಂಟನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ವಾರಕ್ಕೆ ಎರಡು ಮೊಟ್ಟೆಗಳು ವಿತರಣೆಯಂತೆ 84 ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

More News

You cannot copy content of this page