Search

NO MOBILE IN TEMPLE: ರಾಜ್ಯದ ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ದೇವಾಲಯದ ಆವರಣಕ್ಕೆ ತೆರಳಿ ರೀಲ್ಸ್ ಮಾಡಿ ಎಂಜಾಯ್ ಮಾಡುತ್ತಿದ್ದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ದೇಗುಲದ ಆವರಣದಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ದೇಗುಲಗಳಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆಧೇಶದಲ್ಲಿ ತಿಳಿಸಿದೆ.

ಈಗಾಗಲೇ ದೇಗುಲಗಳಲ್ಲಿ ಫಲಕಗಳನ್ನು ಅಳವಡಿಸಿದರೂ ಯಾರೂ ಕ್ಯಾರೆ ಅನ್ನುತ್ತಿಲ್ಲ ಎಂಬ ಕಾರಣಕ್ಕಾಗಿ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ.
ಮೊಬೈಲ್ ಫೋನ್ ಶಬ್ದದಿಂದ ದೇಗುಲದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಮಾಡಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ದೇವರ ದರ್ಶನ ಪಡೆಯುವಂತಚೆ ಸೂಚನೆ ನೀಡಲಾಗಿದೆ.

More News

You cannot copy content of this page