ನವದೆಹಲಿ : ಮಣಿಪುರದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರವನ್ನು ಅದೇ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನಂತರ ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದೊಂದು ಸಾಮಾನ್ಯ ಘಟನೆಯಲ್ಲ, ಇಂತಹ ಘಟನೆಗಳು ನಡೆಯದಂತೆ ಕೆಲಸ ಮಾಡುವುದು ಆ ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ ಎಂದು ತಮ್ಮದೇ ಪಕ್ಷದ ಮಣಿಪುರದ ಮುಖ್ಯಮಂತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಮಸ್ಯೆ ಕೇವಲ ಮಣಿಪುರಕ್ಕೆ ಮಾತ್ರ ಸೀಮಿತವಾಗಿಲ್ಲ, ಇದರಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ. ಆದ್ದರಿಂದ ಈ ಘಟನೆಗೆ ಯಾರೂ ರಾಜಕಾರಣ ಬೆಳಸಬಾರದು ಎಂದು ಗೌತಮ್ ಗಂಭೀರ್ ಮನವಿ ಮಾಡಿದ್ದಾರೆ. ಮೇ 4ರಂದು ಮಣಿಪುರದಲ್ಲಿ ಈ ಘಟನೆ ನಡೆದಿದ್ದು, ಇದೀಗ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.