ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿದ್ದ ಪಿಎಸ್ ಐ ನೇಮಕಾತಿ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ನಿವೃತ್ತ ನ್ಯಾ. ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ ತನಿಖಾ ಆಯೋಗ ರಚಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ತನಿಖಾ ಆಯೋಗವಾಗಿರುವ ಸಿಐಡಿಯಿಂದ ತನಿಖಾ ವರದಿಯನ್ನು ತನಿಖಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 545 ಪಿಎಸ್ ಐ ಅ ವರನ್ನು ಅಕ್ರಮವಾಗಿ ನೇಮಕಾತಿ ಮಾಡಲಾಗಿತ್ತು, ಈ ಇಡೀ ಪ್ರಕರಣವನ್ನು ಇದೀಗ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸಿಐಡಿ ಇಲಾಖೆ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಲಾಗಿದೆ.
ಅಕ್ರಮ ನಡೆಸಿದ್ದ 52 ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಬರೆಯಲು ಅವರನ್ನು ನಿಷೇಧಿಸಲಾಗಿತ್ತು. ಈ ಅಕ್ರಮವನ್ನು ಇದೀಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದಂತಾಗಿದೆ.