DCM Gave Shock To Bommai And BBMP: ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಡಿಸಿಎಂ ಡಿಕೆಶಿ

ಬೆಂಗಳೂರು: 2019-20 ಹಾಗೂ 2022-23ರ ಸಾಲಿನಲ್ಲಿ ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡ ಹಾಗೂ ಪೇಮೆಂಟ್ ಮಾಡಿರುವ ಎಲ್ಲಾ ಕಾಮಗಾರಿಗಳ ಬಗ್ಗೆ ಪಿನ್ ಟು ಪಿನ್ ಡೀಟೇಲ್ಸ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಕೇಳಿದ್ದಾರೆ.
2019-23 ಅವಧಿಯಲ್ಲಿ ಅನುಮೋದಿತ, ಅನುಷ್ಠಾನಗೊಳಿಸಿರುವ, ಟೆಂಡರ್ ಹೀಗೆ ಪ್ರತಿಯೊಂದರ ಮಾಹಿತಿಯನ್ನು ಕೇಳಿದ ಡಿಸಿಎಂ, ಪ್ರತಿ ಕಾಮಗಾರಿಯ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಡಿಕೆಶಿ ಸೂಚನೆ ನೀಡಿದ್ದಾರೆ.

ಮಹಾನಗರ ಪಾಲಿಕೆ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಲು‌ ಮುಂದಾಗಿದ್ದಾರೆ. 2019 ರಿಂದ 2023ರ ಅವಧಿಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿಅವರು.

ಬಿಜೆಪಿ ಅವಧಿಯಲ್ಲಿ ಪಾಲಿಕೆ ಆಯುಕ್ತರಾಗಿದ್ದ ಗೌರವ್ ಗುಪ್ತಾ, ಹಣಕಾಸು ಕಮಿಷನರ್ ಆಗಿದ್ದ ತುಳಸಿ ಮದ್ದಿನೇನಿ ಇವರ ಅವಧಿಯಲ್ಲಿ ಕೈಗೊಂಡಿರುವ ಕಾಮಾಗಾರಿಗಳ ವರದಿಯನ್ನು ಡಿ ಕೆ ಶಿವಕುಮಾರ್ ಅವರು ಕೇಳಿದ್ದಾರೆ. ಬಿಬಿಎಂಪಿ ಕಮಿಷನರ್ ಅವರಿಗೆ ಕೂಡಲೇ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಬೆಂಗಳೂರು ನಗರ ಉಸ್ತುವಾರಿಯಾಗಿರುವ ಡಿಸಿಎಂ ಅವರು ಬಿಬಿಎಂಪಿ ಮೇಲೆ ಮತ್ತಷ್ಟು ಹಿಡಿತ ಸಾಧಿಸುವ ಉದ್ದೇಶ ಹೊಂದಿದ್ದಾರೆ ಎಂದು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.

More News

You cannot copy content of this page