Spandana’s Death Is a Gross Injustice: ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಏಕೆ ಈ ಅನ್ಯಾಯ ಎಂದು ಭಗವಂತನನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಆದರೂ ಸ್ಪಂದನಾ ಅವರ ಸಾವು ಘೋರ ಅನ್ಯಾಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸ್ಪಂದನಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಮಾಧ್ಯಮದವರ ಜತೆ ಮಾನಾಡಿದರು.

ವಾರದ ಹಿಂದೆಯಷ್ಟೇ ವಿಜಯ ರಾಘವೇಂದ್ರ ದಂಪತಿಗಳು ನನ್ನ ಭೇಟಿಯಾಗಿದ್ದರು. ರಾಜ್ಯ ಪ್ರಶಸ್ತಿ ಬಂದ ಕಲಾವಿದರಿಗೆ ನೀಡುವ ಸೈಟಿನ ಕುರಿತು ಮನವಿ ಸಲ್ಲಿಸಿದ್ದರು.

ಆದರೆ ಇಷ್ಟು ಬೇಗ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಸ್ಪಂದನಾ ಅವರು ಮೃತಪಟ್ಟಿರುವುದು ಆಘಾತಕಾರಿ ಮತ್ತು ನೋವಿನ ಸಂಗತಿ.

ಸ್ಪಂದನಾ ಅವರ ಹಠಾತ್‌ ಸಾವಿನ ಆಘಾತ ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ. ಕುಟುಂಬದವರ ದುಃಖದಲ್ಲಿ ನಾವು ಪಾಲುದಾರರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

More News

You cannot copy content of this page