ನವದೆಹಲಿ: ಮುಂಬರವು ಲೋಕಸಭಾ ಚುನಾವಣೆ ಹಾಗೂ ಇನ್ನಿತರ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಮತದಾರರನ್ನು ಉತ್ತೇಜಿಸಲು ಕ್ರಿಕೆಟ್ ದಂತಕಥೆ ಲಿಟರ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಕೇಂದ್ರ ಚುನಾವಣಾ ಆಯೋಗದ ನ್ಯಾಷನಲ್ ಐಕಾನ್ ಆಗಿ ನೇಮಕ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ ಮತ್ತು ಸಚಿನ್ ತೆಂಡುಲ್ಕರ್ ನಡುವೆ ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ನಾಳೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ನಾಳೆಯಿಂದ ಸಚಿನ್ ಮತದಾನದ ಜಾಗೃತಿ ಮೂಡಿಸುವ ಕೆಲಸದಲ್ಲಿ ಅವರು ತೊಡಗಿಸಿಕೊಳ್ಳಲಿದ್ದಾರೆ.

ಸಚಿನ್ ಯುವಕರ ಮೇಲೆ ತಮ್ಮದೇ ಆದ ಪ್ರಭಾವವನ್ನು ಬೀರಿದ್ದಾರೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಉದ್ದೇಶದಿಂದ ಅವರನ್ನು ನ್ಯಾಷನಲ್ ಐಕಾನ್ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದ್ದು, 2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕ್ರಿಕೆಟಿಗ ಎಂ ಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿಕೋಮ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನ್ಯಾಷನಲ್ ಐಕಾನ್ ಆಗಿದ್ದರು.