Darshan Apologises To Media: “ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ”: ನಟ ದರ್ಶನ್ ಕ್ಷಮೆಯಾಚನೆ

ಮಾಧ್ಯಮಗಳ ಕುರಿತು ಕೆಟ್ಟದಾಗಿ ಮಾತನಾಡಿದ ಕಾರಣ ಸ್ಯಾಂಡಲ್ ವುಡ್ ನಟ ದರ್ಶನ್ ಮೇಲೆ ಅಘೋಷಿತ ನಿರ್ಬಂಧ ಹೇರಲಾಗಿತ್ತು. ಅವರ ಕುರಿತ ಸುದ್ದಿ ಆಗ್ಲಿ, ಚಿತ್ರದ ಪ್ರಚಾರವಾಗ್ಲಿ ಯಾವ್ದೂ ಪ್ರಮುಖ ಮಾಧ್ಯಮಗಳಲ್ಲಿ ಭಿತ್ತರವಾಗ್ಲಿಲ್ಲ. ಹೀಗಾಗಿ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನೇರವಾಗಿ ಯೂಟ್ಯೂಬರ್ ಗಳ ಬಳಿಯೇ ಹೋಗಿ, ಭೇಷ್ ಎನಿಸಿಕೊಂಡು ಚಿತ್ರದ ಪ್ರಚಾರ ಗಿಟ್ಟಿಸಿಕೊಂಡಿದ್ದರು ದರ್ಶನ್. ಇದೀಗ ತಮ್ಮ ಹೇಳಿಕೆ ತಪ್ಪಾಗಿದ್ದು, ಮಾತನಾಡಿದ್ದಕ್ಕಾಗಿ ಕ್ಷಮೆ ಯಾಚಿಸಿದ್ದಾರೆ.

ನಟ ದರ್ಶನ್ ಬರೆದ ಪತ್ರದಲ್ಲಿ ಏನಿದೆ..?

ತಮ್ಮ ಹೇಳಿಕೆ ಕುರಿತು ಪ್ರಮುಖ ಮಾಧ್ಯಮಗಳಿಗೆ ಪತ್ರ ಬರೆದು ಕಳಿಸಿರುವ ನಟ ದರ್ಶನ್, ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿತ್ತು. ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ..! ಆ ವ್ಯಕ್ತಿ ಯಾವ ದುರುದ್ದೇಶದಿಂದ ವಿಡಿಯೋ ಮಾಡಿದರೋ ಗೊತ್ತಿಲ್ಲ. ಆದರೂ, ಆ ವ್ಯಕ್ತಿಗೆ ಒಳ್ಳೆಯದಾಗಲಿ. ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ. ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆಂದು ಭಾವಿಸುತ್ತೇನೆ ಎಂದು ಸುದೀರ್ಘ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ.

More News

You cannot copy content of this page