Search

Hoysala Temples now India’s 42nd UNESCO’s World Heritage Site: ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಬೇಲೂರು, ಹಳೆಬೀಡು, ಸೋಮನಾಥ ದೇಗುಲ: ಪ್ರಧಾನಿ ಶ್ಲಾಘನೆ

ಬೆಂಗಳೂರು: ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿತಲ್ಲಿ ಸ್ಥಾನ ಪಡೆದಿವೆ.

12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶಿಲ್ಪಕಲಾ ಶೈಲಿಯ ದೇಗುಲಗಳಾದ
ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇಶ್ವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ 42 ನೇ ಪಟ್ಟಿಗೆ ಸೇರ್ಪಡೆ ಆಗಿದೆ.

https://twitter.com/UNESCO/status/1703771731049992220

ಸೌದಿ ಅರೇಬಿಯಾ ದಲ್ಲಿ ನಡೆದ 45ನೇ ವಿಶ್ವ ಪಾರಂಪರಿಕ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರವೀಂದ್ರನಾಥ ಠಾಗೋರ್ ಅವರು ಆರಂಭಿಸಿದ ಶಾಂತಿನಿಕೇತನವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗಿತ್ತು. ಇದೀಗ ಕರ್ನಾಟಕದ ಹೆಮ್ಮೆಯಾಗಿರುವ ಹೊಯ್ಸಳ ದೇಗುಲಗಳು ವಿಶ್ವ ಪಾರಂಪರಿಕ ಪಟ್ಟಿಯನ್ನು ಸೇರಿವೆ.

https://x.com/narendramodi/status/1703822750291550690?t=eb2ZOPRXxYNn9aIWWMJWXA&s=08

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.ಯುನೆಸ್ಕೋ ಪೋಸ್ಟ್​ ಅನ್ನು ಶೇರ್​ ಮಾಡಿರುವ ಅವರು, ಭಾರತಕ್ಕೆ ಇನ್ನಷ್ಟು ಹೆಮ್ಮೆ.. ಹೊಯ್ಸಳರ ಭವ್ಯವಾದ ಪವಿತ್ರ ದೇವಾಲಯಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸಂಕೀರ್ಣ ವಿವರಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ಅಸಾಧಾರಣ ಕರಕುಶಲತೆಗೆ ಸಾಕ್ಷಿಯಾಗಿದೆ ಎಂದು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

More News

You cannot copy content of this page