ಬೆಂಗಳೂರು : ನಾನಾ ಚರ್ಚೆಗೆ ಗ್ರಾಸವಾಗಿರುವ ವಿವಾದಿತ ಜಾತಿ ಗಣತಿ ವರದಿಯನ್ನು ನವೆಂಬರ್ 24ರೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿತ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಗಣತಿ ಬಗ್ಗೆ ಪರ ಮತ್ತು ವಿರೋಧದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಜಾತಿಗಣತಿ ವರದಿಯನ್ನು ಸರ್ಕಾರ ಅಂಗೀಕರಿಸದೇ ಇರಲು ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರು ಈ ಮೇಲಿನ ಹೇಳಿಕೆ ನೀಡಿದರು.
ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಜಾತಿಗಣತಿ ವರದಿಯನ್ನು ತಿರಸ್ಕರಿಸಲು ಒಕ್ಕಲಿಗರ ಸಮುದಾಯ ನಿರ್ಧಾರ ಕೈಗೊಂಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಅದರ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಹೇಳಿದರು. ಜಾತಿಗಣತಿ ವರದಿ ದೋಷಪೂರಿತ ಮತ್ತು ಅವೈಜ್ಞಾನಿಕ ಎಂದು ಸ್ವಾಮೀಜಿ ಕರೆದಿದ್ದು. ಅದನ್ನು ಮರು ಸಮೀಕ್ಷೆ ನಡೆಸಲು ಅವರು ಸರ್ಕಾರವನ್ನು ಒತ್ತಾಯಿಸಿದ್ದರು.
ಅದೇ ರೀತಿಯಲ್ಲಿ ಜಾತಿ ಗಣತಿ ವರದಿ ಬೆಂಕಿಯಲ್ಲಿ ಎಸೆಯಲು ಅರ್ಹವಾಗಿದೆ ಎಂದು ಬಿಜೆಪಿ ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಅವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರಲ್ಲದೆ, ವರದಿಯನ್ನು ನವೆಂಬರ್ 24 ರೊಳಗೆ ಸಲ್ಲಿಕೆಯಾಗಲಿದೆ ಎಂದು ಮತ್ತೊಮ್ಮೆ ಹೇಳಿದರು.