ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಬರದ ಛಾಯೆ ಆವರಿಸಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಬರ ಪರಿಶೀಲನೆ ನಡೆಸಿದರು. ಆದ್ರೆ ಬರ ಅಧ್ಯಯನಕ್ಕೆ ಮಳೆ ಅಡ್ಡಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಬರ ಪರಿಶೀಲನೆಯನ್ನು ಮೊಟಕುಗೊಳಿಸಿದ ಸಚಿವರು ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.

ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು, ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಇನ್ನೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕು ಹಾಗೂ ಕುಂದಗೋಳ ತಾಲೂಕಿನ ಬರ ಪರಿಶೀಲನೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಮಳೆಯ ಆಗಮನದಿಂದ ಕಾರ್ಯಕ್ರಮ ಮೊಟಕುಗೊಂಡಿದೆ. ಈ ನಿಟ್ಟಿನಲ್ಲಿ ಮಳೆಯಾಗಿದ್ದರಿಂದ ರೈತರು ಹರ್ಷ ವ್ಯಕ್ತಪಡಿಸಿದರು.