5 Lack Compensation: ನಾಯಿ ಕಡಿತದಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ನೀಡಿ: ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಬೆಂಗಳೂರು: ನಾಯಿ ಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ ಪ್ರಸನ್ನ ಬಿ ವರಾಳೆ, ನ್ಯಾ ಕೃಷ್ಣ ಎಸ್ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

ಇತ್ತೀಚೆಗೆ ಅಷ್ಟೇ ರಾಜ್ಯಾದ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ರಾಜ್ಯದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು , ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿ ಹೋಗಿದೆ. ಈ ವಿಚಾರವನ್ನು ಪ್ರಸ್ತಾಪಿಸಿ ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೆಲ ಸೂಚನೆಗಳನ್ನ ಸರ್ಕಾರಕ್ಕೆ ನೀಡಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್, ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಹೈ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

More News