PM IN DUBAI: ದುಬೈ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವಿಶ್ವ ಹವಾಮಾನ ಕ್ರಿಯಾ ಶೃಂಗ ಸಭೆಯಲ್ಲಿ ಭಾಗಿ

ನವದಹೆಲಿ: ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28) ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗ ಸಭೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದುಬೈ ಪ್ರವಾಸ ಕೈಗೊಂಡಿದ್ದಾರೆ.

ದುಬೈ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಯುಎಇ ಉಪಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಆಲ್ ನಹ್ಯಾನ್ ಅವರು ಆತ್ಮೀಯ ಸ್ವಾಗತಿಸಿದರು.

ದುಬೈ ತಲುಪಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಪ್ರಧಾನಿಯವರು ಶೃಂಗ ಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದ್ದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಭಾರತೀಯ ಸಮುದಾಯದಿಂದ ಸ್ವಾಗತ
ಪ್ರಧಾನಿ ನರೇಂದ್ರ ಮೋದಿಯವರಿಗೆ ದುಬೈನಲ್ಲಿರುವ ಭಾರತೀಯ ಸಮುದಾಯದವರು ಆತ್ಮೀಯವಾಗಿ ಸ್ವಾಗತಿಸಿದರು. ಸ್ವಾಗತದಿಂದ ನಾನು ಭಾವುಕನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹ ನಮ್ಮ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದು ಅವರು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶೃಂಗ ಸಭೆಯಲ್ಲಿ ಪ್ರಧಾನಿಯವರು ಮೂರು ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಸಿರು ಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಬಗ್ಗೆ ಶೃಂಗಸಭೆಯಲ್ಲಿ ವಿಶ್ವ ನಾಯಕರು ಚರ್ಚಿಸಲಿದ್ದಾರೆ.

More News

You cannot copy content of this page