ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿ, ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಯಾದಗಿರಿಯಲ್ಲಿ ಡಿಹೆಚ್ಓ ಆಗಿರುವ ಡಾ ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ನಿವಾಸ ಮತ್ತು ಯಾದಗಿರಿಯ ಕಚೇರಿಯ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿ ಅಗತ್ಯ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಡಾ ಪ್ರಭುಲಿಂಗ ಅವರಿಗೆ ಸೇರಿದ ಕಲಬುರಗಿಯಲ್ಲಿರುವ ಫಾರ್ಮ್ ಹೌಸ್ ಮತ್ತು ಕಲಬುರಗಿಯ ಕರುಣೇಶ್ವರ ಕಾಲೋನಿಯಲ್ಲಿನ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳ, ತಪಾಸಣಾ ಕಾರ್ಯ ಮುಂದುವರೆಸಿದ್ದಾರೆ.
ಬಳ್ಳಾರಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬಳ್ಳಾರಿ ಮತ್ತು ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ ಹಾಗೂ ಅರಣ್ಯ ಇಲಾಖೆಯ ಡಿಆರ್ ಎಫ್ ಓ ಅವರ ಬಳ್ಳಾರಿ, ಗಂಗಾಗವತಿ ಮತ್ತು ಹೊಸಪೇಟೆ, ಕಂಪ್ಲಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ.