ಹವಾಮಾನ ಇಲಾಖೆ ತಮಿಳುನಾಡಿಗೆ ಭೀಕರ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ನೀಡಿದ ಬೆನ್ನಲ್ಲೇ ಅಬ್ಬರದಿಂದ ಸುರಿದ ಮಳೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಪ್ರವಾಹವನ್ನೇ ಸೃಷ್ಠಿಸಿದೆ.
ಬಂಗಾಳಕೊಲ್ಲಿಯಲ್ಲಿ ಡಿ.4ರಂದು ರೂಪುಗೊಂಡ ಚಂಡಮಾರುತ (ಮಿಚಾಂಗ್) ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿಗೆ ಬಂತು ಅಪ್ಪಳಿಸಿದೆ. ಪರಿಣಾಮ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಅಲ್ಲದೇ ಆಂಧ್ರ ಪ್ರದೇಶದ ಹಲವು ಜಿಲ್ಲೆಗಳಲ್ಲೂ ಮಳೆ ಅಬ್ಬರ ಮುಂದುವರೆದಿದೆ.

ಇಂದು ಚೆನ್ನೈನಲ್ಲಿ ಸುರಿದ ಮಳೆಯು 2015ರ ಪ್ರವಾಹದ ನಂತರ ಸುರಿದ “ಅತಿದೊಡ್ಡ ಮಳೆ” ಎಂದು ಸ್ವತಂತ್ರ ಹವಾಮಾನ ಮುನ್ಸೂಚಕ ತಮಿಳುನಾಡು ವೆದರ್ಮ್ಯಾನ್ ತಿಳಿಸಿದೆ. ಇನ್ನು ಭಾರೀ ಮಳೆಯಿಂದಾಗಿ ಚೆಂಗಲುಟ್ಟುವಿನಲ್ಲಿ ಇಬ್ಬರು, ಚೆನ್ನೈನಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಚಂಡಮಾರುತದಿಂದ ಅಬ್ಬರಿಸುತ್ತಿರುವ ಮಳೆ ಪ್ರವಾಹವನ್ನೇ ಸೃಷ್ಟಿಸಿರುವ ಕಾರಣ, ಚೆನ್ನೈನ ವಿಮಾನ ನಿಲ್ದಾಣ ಸೇರಿದಂತೆ ಬಹುತೇಕ ಭಾಗಗಳು ಜಲಾವೃತವಾಗಿವೆ.ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ಚಂಡಮಾರುತ ಡಿ.5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ್ದು, ಇಂದೂ ಸಹ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.