ನವದೆಹಲಿ : ಡಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಎರಡನೇ ಸಮನ್ಸ್ ಗೆ ಉತ್ತರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇದೊಂದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತವಾದದ್ದು ಎಂದು ಹೇಳಿರುವುದಾಗಿ ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ಅಬಕಾರಿ ನೀತಿಯ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ ತಮ್ಮ ವಿರುದ್ಧ ಜಾರಿಯಾಗಿರುವ ಸಮನ್ಸ್ ರಾಜಕೀಯ ದುರುದ್ದೇಶದಿಂದ ಕೂಡಿದೆ, ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ನಾನು ಜೀವನವನ್ನು ಅತ್ಯಂತ ಪ್ರಾಮಾಣಿಕ ಮತ್ತು ಪಾರದರ್ಶಕತೆಯಿಂದ ನಡೆಸುತ್ತಿದ್ದೇನೆ. ಮರೆಮಾಚಲು ಏನೂ ಇಲ್ಲ, ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ ಎನ್ನಲಾಗಿದೆ. ಕೇಜ್ರಿವಾಲ್ ಹತ್ತು ದಿನಗಳವರೆಗೆ ಧ್ಯಾನ ಮಾಡಲಿದ್ದಾರೆ. ಆದರೆ, ಅವರು ತೆರಳಿರುವ ಸ್ಥಳವನ್ನು ಮಾತ್ರ ಬಹಿರಂಗಪಡಿಸಿಲ್ಲ.
ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಇಡಿ ಸಮನ್ಸ್ ನೀಡಿತ್ತು. ಆಂದು ಕೂಡ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ.