HD Kumaraswamy: ಮೈತ್ರಿ ಖಾತ್ರಿ. ಬಿಜೆಪಿ ಒಳ ಸಮಸ್ಯೆ ಹೈಕಮಾಂಡ್ ಗೆ ಬಿಟ್ಟದ್ದು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ: ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಬಗ್ಗೆ ಯಾರಿಗೂ ಅಸಮಧಾನ ಇಲ್ಲ. ಬಿಜೆಪಿಯಲ್ಲಿ ಸಣ್ಣಪುಟ್ಟ ಸಮಸ್ಯೆ ಇರಬಹುದು. ದೆಹಲಿ ಮತ್ತು ರಾಜ್ಯ ನಾಯಕರಿಗೆ ಇದನ್ನು‌ ನಿಭಾಯಿಸುವ ಸಾಮರ್ಥ್ಯ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ತಂಡ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಬಳಿಕ ದೆಹಲಿಯಲ್ಲಿ ಗೋಷ್ಠಿ ಕರೆದು ಮಾತನಾಡಿದ ಅವರು, ದೇಶದ ಪ್ರಧಾನಿಯವರನ್ನು ನಾನು ದೇವೇಗೌಡರು, ರೇವಣ್ಣ ಇತರ ಶಾಸಕರು ಭೇಟಿಯಾಗಿದ್ದೇವೆ. ನಾನು ಮತ್ತು ದೇವೇಗೌಡರು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಸೀಟು ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ಕ್ಷೇತ್ರದಲ್ಲಿ ಯಾರು ನಿಲ್ಲಬೇಕು ಎಂಬ ಬಗ್ಗೆ ಅಂತಿಮ ನಿರ್ಣಯ ಮಾಡುತ್ತೇವೆ. ವಿಶ್ವಾಸ ಎರಡು ಪಕ್ಷಗಳ ನಡುವೆ ಮೂಡಬೇಕು. ಅದಕ್ಕೆ ನಾನು ಆದ್ಯತೆ ನೀಡುತ್ತಿದ್ದೇನೆ. ಸೀಟು ಹಂಚಿಕೆ ಆಮೇಲೆ, ಅದರಲ್ಲಿ ಹೆಚ್ಚು ಕಮ್ಮಿ ಆಗುತ್ತೆ. ಜನವರಿ ಅಂತ್ಯದೊಳಗೆ ಸರ್ಕಾರದ ವೇದಿಕೆ ಸಿದ್ಧ ಮಾಡುತ್ತೇವೆ ಎಂದರು. ಇದೇ ವೇಳೆ ಮೈತ್ರಿಯಿಂದ ಸೋಲೆಂಬ ಲೆಕ್ಕಾಚಾರದ ಕುರಿತು ಮಾತನಾಡಿದ ಅವರು, ಮೈತ್ರಿ ಯಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಇಂದು ಅಥವಾ ನಾಳೆ‌ ಅಮಿತ್ ಶಾ ಮತ್ತು ಜೆ.ಪಿ ನಡ್ಡಾ ರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

“ಲೋಕ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ”

ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯಲ್ಲಿ ಇರಲ್ಲ. ಆದರೆ, 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು. ಸ್ಪರ್ಧೆ ಮಾಡಲ್ಲ ಅಂತಾ ಅವರೇ ಸ್ಪಷ್ಟಪಡಿಸಿದ್ದಾರೆ. ನನ್ನ ಸ್ಪರ್ಧೆ ಬಗ್ಗೆ ನಮ ಪಕ್ಷದಲ್ಲಿ ತಿರ್ಮಾನ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

More News

You cannot copy content of this page