Sakshi Malik Retires: ಇನ್ಮುಂದೆ ನಾನು ಇಲ್ಲಿ ಕಾಣಿಸಿಕೊಳ್ಳುವುದಿಲ್ಲ: ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್

ನವದೆಹಲಿ: ಇಂದಿನ ನಂತರ ನಾನು ಮತ್ತೆ ಇಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇಲ್ಲಿಯವರೆಗೆ ನನ್ನನ್ನು ಬೆಂಬಲಿಸಿದ ಮತ್ತು ನನ್ನನ್ನು ಈ ಹಂತಕ್ಕೆ ಕರೆತಂದ ಎಲ್ಲಾ ದೇಶವಾಸಿಗಳಿಗೆ ಧನ್ಯವಾದಗಳು ಎಂದು ಹೇಳುವ ಮೂಲಕ ಕುಸ್ತಿಪಟು ಸಾಕ್ಷಿ ಮಲ್ಲಿಕ್ ವಿದಾಯ ಘೋಷಣೆ ಮಾಡಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿತ್ತು. ಇದರ ವಿರುದ್ಧ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪೂನಿಯಾ ನೇತೃತ್ವದಲ್ಲಿ ಅನೇಕ ಕುಸ್ತಿಪಟುಗಳು ಪ್ರತಿಭಟನೆ ಮಾಡಿದ್ದು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಆಗಿತ್ತು.

ಇದೀಗ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ. ಆದರೆ ಸಂಜಯ್ ಸಿಂಗ್ ಮಾಜಿ ಕುಸ್ತಿ ಫೆಡರೇಶನ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಎಂದು ತಿಳಿದು ಬಂದಿದ್ದು, ಸಂಜಯ್ ಸಿಂಗ್ ಆಯ್ಕೆ ಬೆನ್ನಲ್ಲೇ ಸಾಕ್ಷಿ ಮಲಿಕ್ ವಿದಾಯ ಘೋಷಣೆ ಮಾಡಿದ್ದಾರೆ.

ಈ ಹಿನ್ನಲೆ ಬೇಸರ ಗೊಂಡು ಭಾರತಕ್ಕೆ ಒಲಿಂಪಿಕ್ ನಲ್ಲಿ ಚಿನ್ನದ ಪದಕ ತಂದ ತಾರೆ ತಮ್ಮ ಕುಸ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಗೋಷ್ಠಿ ಕರೆದು ಬಹಿರಂಗ ಪಡಿಸಿದ ಅವರು, ನಾನು ಒಂದು ವಿಷಯ ಹೇಳಲು ಬಯಸುತ್ತೇನೆ. ನನ್ನ ಪೂರ್ಣ ಹೃದಯದಿಂದ ಹೋರಾಡಿದೆ. ಆದರೆ ಅವರ ಸಹೋದ್ಯೋಗಿ, ಅವರ ವ್ಯವಹಾರ ಪಾಲುದಾರರಾಗಿರುವ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಂತಹ ವ್ಯಕ್ತಿ ಈ ಒಕ್ಕೂಟದಲ್ಲಿ ಉಳಿದರೆ, ನಾನು ನನ್ನ ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಹೇಳುವ ಮೂಲಕ ವಿದಾಯ ಘೋಷಿಸಿದ್ದಾರೆ. ಇಂದಿನ ನಂತರ ನಾನು ಮತ್ತೆ ಇಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇಲ್ಲಿಯವರೆಗೆ ನನ್ನನ್ನು ಬೆಂಬಲಿಸಿದ ಮತ್ತು ನನ್ನನ್ನು ಈ ಹಂತಕ್ಕೆ ಕರೆತಂದ ಎಲ್ಲಾ ದೇಶವಾಸಿಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

More News

You cannot copy content of this page