Hijab Ban Issue: ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ

ಸಿಎಂ ಸಿದ್ದರಾಮಯ್ಯ ರ ಹಿಜಾಬ್ ಕುರಿತ ಹೇಳಿಕೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ರ ನೋ ಹಿಜಾಬ್ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತು. ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ ಪಾಳಯ ಸಾಕಷ್ಟು ಟೀಕೆ ಮಾಡ್ತು. ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿ ಇದ್ದರೂ ಮುಖ್ಯಮಂತ್ರಿ ಗಳು ವಿನಾಕಾರಣ ಹಿಜಾಬ್ ವಿಚಾರ ಪ್ರಸ್ತಾಪ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದಲೇ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಬಿಜೆಪಿ ಪಾಳಯದಿಂದ ಟೀಕೆ ವ್ಯಕ್ತವಾಯ್ತು.

ತೀವ್ರ ಟೀಕೆಯಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಧ್ಯಕ್ಕೆ ಹಿಜಾಬ್ ಆದೇಶ ವಾಪಸ್ ಪಡೆದಿಲ್ಲ.
ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ ಅಷ್ಟೇ.. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸಮಜಾಯಿಷಿ ನೀಡಿದ್ದಾರೆ.

ಕಾರ್ಯಕ್ರಮ ವೊಂದರಲ್ಲಿ ಭಾಗಿಯಾಗಿದ್ದಾಗ ಯಾರೋ ಒಬ್ಬರು ಕೇಳಿದ ಪ್ರಶ್ನೆ ಗೆ ಉತ್ತರ ಕೊಟ್ಟಿದ್ದೇನೆ. ಚರ್ಚೆ ಮಾಡಿ ನಿರ್ಧಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಟೀಕೆ ತಣ್ಣಗೆ ಮಾಡೋ ಪ್ರಯತ್ನ ಮಾಡಿದರು.

More News

You cannot copy content of this page