Yuva Nidhi Launch: ಐದನೇ ಗ್ಯಾರೆಂಟಿ ಯುವನಿಧಿ ಜನರ ತೆಕ್ಕೆಗೆ: ಅರ್ಜಿ ಸಲ್ಲಿಸುವುದು ಹೇಗೆ..?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಕೈ ಪಡೆ ಘೋಷಿಸಿತ್ತು. ಮಾತು ಕೊಟ್ಟಂತೇ ಸರ್ಕಾರ ನಿರ್ಮಾಣವಾದ ಬೆನ್ನಲ್ಲೇ ನಾಲ್ಕು ಯೋಜನೆಗಳನ್ನ ಘೋಷಣೆ ಮಾಡಿದೆ. ಇದೀಗ 5 ನೇ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಉದ್ದೇಶದಿಂದ ಆರಂಭಿಸಿದ ಯೋಜನೆ 2022-23 ಸಾಲಿನಲ್ಲಿ ಪದವಿ ಮುಗಿಸಿದವರಿಗೆ ಅನ್ವಯ ಆಗಲಿದೆ. ಪದವಿ ಮುಗಿಸಿದವರಿಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮುಗಿಸಿದವರಿಗೆ ತಿಂಗಳಿಗೆ 1500 ರೂ. ನಿರುದ್ಯೋಗ ಭತ್ಯೆ ಆಗಿದ್ದು, ಅರ್ಜಿ ಸಲ್ಲಿಸಿ ಆಯ್ಕೆಯಾದವರು ಪ್ರತಿ ತಿಂಗಳ 25ನೇ ತಾರೀಕಿನ ಒಳಗೆ ಭತ್ಯೆಯನ್ನು ಪಡೆಯುತ್ತಾರೆ. ಸುಮಾರು 5.29 ಲಕ್ಷ ಮಂದಿ ಈ ಯೋಜನೆಯ ಅರ್ಹತೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

20222-23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿ 180 ದಿನಗಳು ಕಳೆದರೂ ಉದ್ಯೋಗ ಸಿಗದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಇದಲ್ಲದೇ ಕರ್ನಾಟಕ ಒನ್‌, ಗ್ರಾಮ ಒನ್‌, ಬಾಪೂಜಿ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.

More News

You cannot copy content of this page