Shiva Rajkumar New Movie: ಹೊಸವರ್ಷಕ್ಕೆ ಶಿವರಾಜಕುಮಾರ್ ಹೊಸಚಿತ್ರ: ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ

ಬೆಂಗಳೂರು: ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

More News

You cannot copy content of this page