ಟೋಕಿಯೋ : ಜಪಾನ್ ನ ಟೋಕಿಯೋದ ಹನೆಡಾ ವಿಮಾನ ನಿಲ್ದಾಣದಲ್ಲಿ ರನ್ ವೇ ನಲ್ಲಿ ಚಲಿಸುತ್ತಿದ್ದ ವಿಮಾನವೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ಸುಮಾರು 350ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಪಾನ್ ಏರ್ ಲೈನ್ಸ್ ರನ್ ವೇ ನಲ್ಲಿ ಚಲಿಸುತ್ತಿದ್ದಾಗ ಎದುರಿಗಿದ್ದ ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಜಪಾನ್ ಏರ್ ಲೈನ್ಸ್ ಗೆ ಬೆಂಕಿ ಹತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡಾಗ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ವಿಮಾನದಲ್ಲಿದ್ದವರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ. ಪ್ರಸ್ತುತ ವಿಮಾನಕ್ಕೆ ತಗುಲಿರುವ ಬೆಂಕಿಯನ್ನು ನಂದಿಸುವ ಕೆಲಸ ನಡೆಯುತ್ತಿದೆ. ವಿಮಾನಕ್ಕೆ ಬೆಂಕಿ ತಗುಲಿ ರನ್ ವೇನಲ್ಲಿ ಚಲಿಸುತ್ತಿರುವ ದೃಷ್ಯಗಳು ಸಾಕಷ್ಟು ವೈರಲ್ ಆಗಿದ್ದು, ವಿಮಾನದ ಕಿಟಕಿಯಿಂದ ಜ್ವಾಲೆಗಳು ಹೊರಬರುತ್ತಿರುವುದನ್ನು ಕಾಣಬಹುದಾಗಿದೆ.