YSR CONGRESS WILL MERGED WITH CONGRESS PARTY..!: ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ವೈ ಎಸ್ ಶರ್ಮಿಳಾ

ನವದೆಹಲಿ : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ ಎಸ್ ಶರ್ಮಿಳಾ ಅವರು ಇಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಹಾಗೆಯೇ ಕೆ ಸಿ ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಶರ್ಮಿಳಾ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೈ ಎಸ್ ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ವೈ ಎಸ್ ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಭಾಗವಾಗುತ್ತಿರುವುದು ನನಗೆ ಸಂತೋಷ ತಂದಿದೆ ಎಂದು ಶರ್ಮಿಳಾ ಅವರು ತಿಳಿಸಿದರು.


ವೈ ಎಸ್ ಆರ್ ಪಕ್ಷದ ಸಂಸ್ಥಾಪಕಿಯಾಗಿರುವ ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಈಗಿನ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ. ಇತ್ತೀಚೆಗೆ ತೆಲಂಗಾಣದಲ್ಲಿ ನಡೆದ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದರು.

More News

You cannot copy content of this page