CM MEETS CRICKET LEGEND: ದೆಹಲಿ ವಿಮಾನ ನಿಲ್ದಾಣದಲ್ಲಿ ಕ್ರಿಕೆಟ್ ದಂತಕಥೆಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಿಕೆಟ್ ದಂತಕಥೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಜಾಗತಿಕ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್ ಅನ್ನು ಬಹುವಾಗಿ ಪ್ರೀತಿಸುವ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿನ್ ತೆಂಡೂಲ್ಕರ್ ಅವರ ಅಚ್ಚುಮೆಚ್ಚಿನ ಆಟಗಾರ. ಅವರ ಆಟವನ್ನು ದಶಕಗಳ ಕಾಲ ಆಸ್ವಾದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

More News

You cannot copy content of this page