Search

DRESS CODE IN TEMPLES..?: ತುಂಡು ಬಟ್ಟೆ ಧರಿಸುವವರಿಗೆ ನೋ ಎಂಟ್ರಿ: ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ

ಬೆಂಗಳೂರು : ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಅನ್ನು ಜಾರಿಗೆ ತರಲು ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ದತ್ತಿ ಇಲಾಖೆಯ ಅಧೀನದಲ್ಲಿರುವ ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಲ್ಲಿನ 500 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರಸ್ ಕೋಡ್ ಜಾರಿ ಮಾಡಲು ನಿರ್ಧರಿಸಿದೆ.
ಈ ಸಂಬಂಧ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಅವರಿಗೆ ಮನವಿಪತ್ರ ಸಲ್ಲಿಸಲು ಮಹಾಸಂಘ ಮುಂದಾಗಿದೆ ಎಂದು ಸಂಚಾಲಕ ಮೋಹನ್ ಗೌಡ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇವರ ದರ್ಶನಕ್ಕಾಗಿ ತುಂಡು ಬಟ್ಟೆ ಅಥವಾ ಸಾಂಪ್ರದಾಯಿಕವಲ್ಲದ ಉಡುಗೆಯಲ್ಲಿ ದೇವಸ್ಥಾನಗಳಿಗೆ ಹೋಗುವುದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಲಾರದು. ಪ್ರತಿಯೊಬ್ಬರಿಗೂ ಮನೆಯಲ್ಲಿ ಮತ್ತು ಸಾರ್ವಜನಿಕವಾಗಿ ಏನು ಧರಿಸಬೇಕೆಂಬ ವೈಯಕ್ತಿಕ ಸ್ವಾತಂತ್ರ್ಯವಿದೆ. ಅದೇ ರೀತಿಯಲ್ಲಿ ದೇವಸ್ಥಾನದಲ್ಲಿ ಯಾವ ರೀತಿಯ ಉಡುಗೆ ತೊಡಬೇಕು ಎಂಬುದರ ಕುರಿತು ಅರಿವಿರಬೇಕು ಎಂದಿದ್ದಾರೆ. ದೇವಾಲಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅಲ್ಲ, ಧರ್ಮವನ್ನು ಪಾಲಿಸುವುದು ಮುಖ್ಯವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

More News

You cannot copy content of this page