ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಪರಿಕಲ್ಪನೆ ತಂದು ಕೊಟ್ಟಿದ್ದು ಬಸವೇಶ್ವರರು, ಎಲ್ಲ ಮಠಾಧೀಶರ ಬೇಡಿಕೆ ಕೂಡ ಇದೇ ಆಗಿತ್ತು. ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ ಅನುಮೋದನೆ ಸಿಕ್ಕಿದೆ ಎಂದು ಸಚಿವರು ತಿಳಿಸಿದರು.
ಸಮ ಸಮಾಜ ನಿರ್ಮಾಣವಾಗಬೇಕು, ಮಹಿಳೆಯರಿಗೆ ಸಮಾನ ಹಕ್ಕು ನೀಡಬೇಕು, ಅನುಭವ ಮಂಟಪವನ್ನು ಬಸವೇಶ್ವರ ಅವರು ನಿರ್ಮಾಣ ಮಾಡಿದರು, ಇದು ವಿಶ್ವದ ಮೊದಲ ಸಂಸತ್ತು ಕೂಡ ಹೌದು, ಕನ್ನಡ ಸಾಹಿತ್ಯಕ್ಕೆ ಅಮೋಘ ಕೊಡುಗೆ ಕೊಟ್ಟಿದ್ದಾರೆ, ಆದ್ದರಿಂದ ಬಸವೇಶ್ವರ ಅವರನ್ನು ಕರ್ನಾಟಕ ಸಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ತಿಳಿಸಿದರು.
ವೈಯಕ್ತಿಕವಾಗಿ ನಾನು ಸಂಪುಟ ನಿರ್ಧಾರ ಸ್ವಾಗತ ಮಾಡುತ್ತೇವೆ ಎಂದು ತಿಳಿಸಿದ ಈಶ್ವರ ಖಂಡ್ರೆ, 2025ಕ್ಕೆ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪ ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದರು.




