ಬೆಂಗಳೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ ಲಘು ಹೃದಯಾಘಾತವಾಗಿದ್ದರಿಂದ ಅವರು ಆಸ್ಪತ್ರೆ ದಾಖಲಾಗಿದ್ದಾರೆ.
ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಸದ್ಯ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ವೈದ್ಯರು ನೀಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.