ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ದೆಹಲಿ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದೆ
ಆಂಧ್ರಪ್ರದೇಶದ ಗುಂಟೂರಿನಲ್ಲಿ ನವೀನ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಡೀಪ್ ಫೇಕ್ ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮತ್ತು ವೈರಲ್ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲಾಗಿತ್ತು ಎಂದು ಪೊಲೀಸರ್ ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಸಾಮಾಜಿಕ ಜಾಲತಾಣದ ಖಾತೆದಾರರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಶಂಕಿತರ ಬಗ್ಗೆ ಆಳವಾದ ವಿಚಾರಣೆ ನಡೆಸಿದಾಗ ಆರೋಪಿಯ ಇನ್ಸಾಟ್ರಾಗ್ರಾಮ್ ಅಕೌಂಟ್ ಪತ್ತೆಯಾಗಿತ್ತು. ಬಳಿಕ ಆಂಧ್ರಪ್ರದೇಶದ ಗುಂಟೂರಿನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಹಲವಾರು ಅಂಶಗಳನ್ನು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ರಶ್ಮಿಕಾ ಅವರ ದೊಡ್ಡ ಅಭಿಮಾನಿಯಾಗಿರುವ ಆರೋಪಿ, ಫ್ಯಾನ್ ಪೇಡ್ ಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದ. ಆತ ಮತ್ತಿಬ್ಬರು ಖ್ಯಾತ ಸೆಲೆಬ್ರಿಟಿಗಳ ಎರಡು ಫ್ಯಾನ್ ಪೇಜ್ ಗಳನ್ನು ಸಹ ರಚಿಸಿದ್ದಾನೆ ಎಂದು ತಿಳಿದುಬಂದಿದೆ.
ರಶ್ಮಿಕಾ ಅವರ ಪೇಜ್ ನ ಫಾಲೋವರ್ ಗಳನ್ನು ಹೆಚ್ಚಿಸುವ ಉದ್ದೇಶದಿಂದ ನವೀನ್ ಡೀಪ್ ಫೇಕ್ ವಿಡಿಯೋ ರಚಿಸಿ ಅಕ್ಟೋಬರ್ 13 ರಂದು ಫ್ಯಾನ್ ಪೇಜ್ ನಲ್ಲಿಪೋಸ್ಟ್ ಮಾಡಿದ್ದ ಎಂದು ತನಿಖೆಯಿಂದ ವಿಚಾರ ತಿಳಿದುಬಂದಿದೆ ಎನ್ನಲಾಗಿದೆ.