Sree Siddaganga Math: ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ‘ಸ್ಮೃತಿವನ’ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ

ತುಮಕೂರು (ಸಿದ್ದಗಂಗಾ ಮಠ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ,
ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

More News

You cannot copy content of this page